
ಧರ್ಮಸ್ಥಳ:_ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ, ಹಿಂದೂಗಳ ಭಾವನೆಗೆ ಧಕ್ಕೆಯುಂಟಾಗಿರುವುದನ್ನು ವಿರೋಧಿಸಿ ಇಂದು ಬಿಜೆಪಿ ನಿಯೋಗ ಧರ್ಮಸ್ಥಳಕ್ಕೆ ಭೇಟಿ ನೀಡಿದೆ.
ದೇವರ ದರ್ಶನ ಪಡೆದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ “ಕ್ಷೇತ್ರದ ವಿರುದ್ಧ ಅಪಪ್ರಚಾರವನ್ನು ನಾವು ಸಹಿಸುವುದಿಲ್ಲ. ಎಸ್.ಐ.ಟಿ ತನಿಖೆ ನಡೆಯಲಿ, ಅದರ ಜೊತೆ ಮುಸುಕುಧಾರಿಯನ್ನು ತನಿಖೆಗೆ ಒಳಪಡಿಸಬೇಕು.ದಿನೇಶ್ ಗುಂಡೂರಾವ್, ಡಿಕೆಶಿಯೇ ಕ್ಷೇತ್ರದ ವಿರುದ್ಧ ಷಡ್ಯಂತ್ರ ಅಂತ ಹೇಳಿದ್ದಾರೆ. ಸಿದ್ಧರಾಮಯ್ಯರವರು ಕೂಡಲೇ ತನಿಖೆಗೆ ಆಗ್ರಹಿಸಬೇಕು ಎಂದು ಆಗ್ರಹಿಸಿದ್ದಾರೆ.