




ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್. ಸಿ. ಆರ್. ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಕಾಲೇಜು ವಿಭಾಗದ ಬಾಲಕಿಯರ ತ್ರೋಬಾಲ್ ತಂಡವು ಆ. 16ರಂದು ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ “ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ” ಬಳ್ಳಮಂಜದಲ್ಲಿ ನಡೆದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.


ಇವರಿಗೆ ಸಂಸ್ಥೆಯ ಹಳೆ ವಿದ್ಯಾರ್ಥಿ ತರಭೇತುದಾರರಾದ ಶ್ರದ್ಧಾ ಹಾಗೂ ಪೃಥ್ವಿರಾಜ್ ಅವರು ತರಭೇತಿಯನ್ನು ನೀಡಿರುತ್ತಾರೆ.
ಭಾಗವಹಿಸಿದ ಹಾಗೂ ವಿಜೇತ ತಂಡಗಳಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಂಯೋಜಕರು ಅಭಿನಂದಿಸಿದ್ದಾರೆ.









