ಕಕ್ಯಪದವು: ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಇವರ ಸಹಯೋಗದಲ್ಲಿ ಆ.16ರಂದು ಸರಕಾರಿ ಪ್ರೌಢಶಾಲೆ ಕಾವಳಕಟ್ಟೆ ಬಂಟ್ವಾಳದಲ್ಲಿ ನಡೆದ ವಾಮದಪದವು ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪ್ರೌಢ ವಿಭಾಗದ ಬಾಲಕ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿ ಹತ್ತನೇ ತರಗತಿಯ ಸಾನ್ವಿತ್ ಮತ್ತು ಒಂಬತ್ತನೇ ತರಗತಿಯ ಜನನಿ ವೈಯಕ್ತಿಕ ಚಾಂಪಿಯನ್ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.
ಶಾಲಾ ದೈಹಿಕ ಶಿಕ್ಷಕಿಯರಾದ ಹರಿಣಾಕ್ಷಿ ಜಿ.ಕೆ. ಮತ್ತು ಶ್ರದ್ಧಾ ಅವರ ನೇತೃತ್ವದಲ್ಲಿ ಈ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರು, ಮುಖ್ಯ ಶಿಕ್ಷಕಿ ಹಾಗೂ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದರು.