
ನಿಡ್ಲೆ: ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ನಿಸರ್ಗ ಯುವಜನೇತರ ಮಂಡಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಆ. 17ರಂದು ಬರೆಂಗಾಯ ಉನ್ನತೀಕರಿಸಿದ ಹಿ. ಪ್ರಾ. ಶಾಲಾ ವಠಾರದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಬೆಳಗ್ಗೆ ಮಧುಕರ ರಾವ್ ಮಚ್ಚಳೆ ಉದ್ಘಾಟಿಸಿದರು. ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ಹೇಮಂತ್ ಗೌಡ ಕಜೆ ವಹಿಸಿದ್ದರು. ವಿಶ್ವಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ವಿಷ್ಣು ಮರಾಠ ಕಾಟ್ಲ, ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಅಧ್ಯಕ್ಷ ಪುನೀತ್ ಪೊಂರ್ದಿಲ, ಬರೆಂಗಾಯ ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ ಪೋರ್ಕಳ, ಮಧುಕರ ರಾವ್ ಮಚ್ಚಳೆ ಉಪಸ್ಥಿತರಿದ್ದರು.

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಸಮಾಜಸೇವಕರಾದ ಸುಂದರ ಗೌಡ ಹಾಗೂ ಮಂಗಳೂರು ವಿಜಯಕುಮಾರ್ ಕೊಡಿಯಲ್ ಬೈಲ್ ಅವರನ್ನು ಸನ್ಮಾನಿಸಲಾಯಿತು. ಶಾಸಕ ಹರೀಶ್ ಪೂಂಜ ಹಾಗೂ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು.
ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳು, ಮಕ್ಕಳಿಗೆ ಮುದ್ದುಕೃಷ್ಣ ವೇಷ ಸ್ಪರ್ಧೆ ಜರಗಿತು. ಕಾರ್ಯಕ್ರಮದ ಯಶಸ್ವಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಬರಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ನಿಡ್ಲೆ ಇದರ ಪದಾಧಿಕಾರಿಗಳು, ಸರ್ವ ಸದಸ್ಯರು ಸಹಕರಿಸಿದರು. ಗಾಯತ್ರಿ ಹೆಚ್. ಗೌಡ ಗುತ್ತಿಮಾರು ಪ್ರಾರ್ಥಿಸಿದರು. ಗುಣಶ್ರೀ ಕಜೆ ಸ್ವಾಗತಿಸಿದರು. ಗೀತಾ ಪಿ. ಡಿ. ಕಜೆ ಕಾರ್ಯಕ್ರಮ ನಿರೂಪಿಸಿ, ಆದಿತ್ಯ ಜೆ. ಶೆಟ್ಟಿ ಧನ್ಯವಾದವಿತ್ತರು.