
ಬೆಳ್ತಂಗಡಿ: ಮೂಡುಬಿದ್ರೆಯ ದ ಯೆನೆಪೋಯ ಕಾಲೇಜು ತೋಡಾರಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಭಾರತೀಯ ಸೇನೆಯ ನಿವೃತ್ತ ಸೈನಿಕ ಸುಬೇದಾರ್ ಮೇಜರ್ ರಾಜೇಂದ್ರ ಜಿ.ಕೆ.ಪಿ. ಅವರು ಮುಖ್ಯ ಅತಿಥಿಯಾಗಿ ಆಗಮಿಸಿ, ಧ್ವಜಾರೋಹಣವನ್ನು ನೆರವೇರಿಸಿದರು.
ಉಪನ್ಯಾಸದ ಮೂಲಕ ವಿದ್ಯಾರ್ಥಿಗಳಿಗೆ ಭವ್ಯ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸವನ್ನು ತಿಳಿಸುತ್ತಾ, ದೇಶಕ್ಕಾಗಿ ಪ್ರಾಣಾರ್ಪಣೆಗೈದ ವೀರ ಮಹನೀಯರನ್ನು ಸ್ಮರಿಸಿದರು. ಸ್ವಾಸ್ಥ್ಯ ದೇಶಕ್ಕಾಗಿ ಯುವಕರು ತಮ್ಮ ನೆಲೆಯಲ್ಲಿ ಮಾಡಬಹುದಾದ ಕಾರ್ಯಗಳ ಕುರಿತು ಮನ ಮುಟ್ಟುವಂತೆ ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಹರೀಶ್ ಶೆಟ್ಟಿ, ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್, ದೈಹಿಕ ಶಿಕ್ಷಣ ನಿರ್ದೇಶಕ ಲೋಕೇಶ್ ಅವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ದೇಶಭಕ್ತಿಯನ್ನು ಸಾರುವ ಸಮೂಹ ಗೀತೆಯನ್ನು ಹಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.