
ಕಾಯರ್ತಡ್ಕ: ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಬಹಳ ವಿಜ್ರಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ ಕಳೆಂಜ ಸೈಂಟ್ ಸೆಬಾಸ್ಟಿಯನ್ ಚರ್ಚ್ ಧರ್ಮಗುರು ಸುನಿಲ್ ಪೂವತ್ತಿಂಗಲ್ ಹಾಗೂ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಜೈಸನ್ ವೆರ್ನೂರ್ ಹಾಗೂ ಮುಖ್ಯ ಶಿಕ್ಷಕಿ ಸಿಸ್ಟರ್ ಲಿಸ್ನ ಮ್ಯಾಥ್ಯೂ ಅವರು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿ ಇಫಾ ಸ್ವಾಗತಿಸಿದರು. ಧರ್ಮಗುರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಮಹಿನ್ ಎಂ.ಎಸ್ ಅವರ ಉಸ್ತುವಾರಿಯಲ್ಲಿ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರ ಪಥಸಂಚಲನ ಕಾರ್ಯಕ್ರಮವು ಅಚ್ಚುಕಟ್ಟಾಗಿ ಮೂಡಿಬಂದಿತು.
ಸಹ ಶಿಕ್ಷಕ ಸುರೇಶ್ ಶೆಟ್ಟಿ ಅವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಣೆಯನ್ನು ಮಾಡಲಾಯಿತು. ಶಾಲಾ ಮಕ್ಕಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು. ವಿದ್ಯಾರ್ಥಿನಿಯರಾದ ದಿವೈನ ಟಿ.ಎ ಹಾಗೂ ತನ್ವಿ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿ ಅನುಷಾ ಕೆ. ಮ್ಯಾಥ್ಯೂ ಧನ್ಯವಾದವಿತ್ತರು.