
ನ್ಯಾಯತರ್ಫು: ರಕ್ತೇಶ್ವರಿ ಪದವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಕುಶಾಲಪ್ಪ ಗೌಡ ಕಲಾಯಿತೊಟ್ಟು ಧ್ವಜಾರೋಹಣ ನೆರವೇರಿಸಿದರು.
ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್. ದೀಪ ಬೆಳಗಿಸಿ ಉದ್ಘಾಟಿಸಿದರು. ಸಭಾ ಅಧ್ಯಕ್ಷತೆಯನ್ನು ಕುಶಾಲಪ್ಪ ಗೌಡ ಕಲಾಯಿತೋಟ್ಟು ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ್ ಕುಮಾರ್, ಮೋಹಿನಿ ಬೊಮ್ಮಣ್ಣ ಗೌಡ ಮತ್ತು ಶ್ವೇತಾ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಇಂದಿರಾ, ಮಾಜಿ ಅಧ್ಯಕ್ಷರಾದ ಗಿರಿಯಪ್ಪ ಗೌಡ, ಯಾದವ ಗೌಡ,
ಕವಿತಾ, ಶ್ರೀ ಭಜನಾ ಮಂಡಳಿಯ ಅಧ್ಯಕ್ಷ ಯುವರಾಜ್ ಎಮ್., ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಸಂತ ಕುಮಾರ್, ಅಂಗನವಾಡಿ ಕಾರ್ಯಕರ್ತೆ ಸುನಿತಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಪೋಷಕರು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ದೇಶ ಭಕ್ತಿ ಗೀತೆ, ಚದ್ಮವೇಶ ಸ್ಪರ್ಧೆ ನಡೆಯಿತು. ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಚೈತ್ರ ಪ್ರಭಾ ಸ್ವಾಗತಿಸಿದರು. ಸಹ ಶಿಕ್ಷಕಿ ಲಾವಣ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು