ಬೆಳ್ತಂಗಡಿ: 2012ರಲ್ಲಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬೂರ್ಜೆ ಎಂಬಲ್ಲಿ ನಡೆದಿದ್ದ ಆನೆ ಮಾವುತ ನಾರಾಯಣ ಮತ್ತು ಅವರ ಸಹೋದರಿ ಯಮುನಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ಆಗ್ರಹಿಸಿ ಅವರ ಮಕ್ಕಳಾದ ಗಣೇಶ್ ಮತ್ತು ಭಾರತಿ ಬೆಳ್ತಂಗಡಿಯ ಎಸ್.ಐ.ಟಿ ಕಚೇರಿಗೆ ಆ.18ರಂದು ದೂರು ನೀಡಿದ್ದಾರೆ. ಅಧಿಕಾರಿಗಳು ಸ್ಥಳೀಯ ಠಾಣೆಗೆ ದೂರು ನೀಡಲು ತಿಳಿಸಿದ್ದಾರೆ.
ಧರ್ಮಸ್ಥಳದಲ್ಲಿ ಆನೆ ಮಾವುತ ಮತ್ತು ತಂಗಿಯ ಕೊಲೆ ಪ್ರಕರಣ: ಮರುತನಿಖೆಗೆ ಆಗ್ರಹಿಸಿ ಎಸ್.ಐ.ಟಿ ಕಚೇರಿಗೆ ದೂರು
