
ಧರ್ಮಸ್ಥಳ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪರಿಸರ ಹಾಗೂ ದೇಶಭಕ್ತಿಯನ್ನು ಬಿಂಬಿಸುವ ಹಾಡು ನೃತ್ಯ, ಭಾಷಣ ಅಭಿನಯ ಗೀತೆ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ಧ. ಮಂ. ತಾಂತ್ರಿಕ ವಿದ್ಯಾಲಯದ ಮುಖ್ಯ ಗ್ರಂಥಪಾಲಕಿ ರಜತ ಪಿ. ಶೆಟ್ಟಿ ಅವರು ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಮೆಚ್ಚುಗೆ ಸೂಚಿಸಿ, ಪ್ರಕ್ರತಿಯ ನಡುವೆ ಮಕ್ಕಳು ಹೇಗೆ ಬೆಳೆಯಬೇಕು ಎಂಬುದನ್ನು ಎಳೆ ಎಳೆಯಾಗಿ ವಿವರಿಸಿದರು.
ಶಾಲಾ ಮುಖ್ಯ ಶಿಕ್ಷಕಿ ಪರಿಮಳ ಎಂ.ವಿ. ಅವರ ಮಾರ್ಗದರ್ಶನದೊಂದಿಗೆ ಮೂಡಿಬಂದ ಈ ಕಾರ್ಯಕ್ರಮ, ದೇಶಭಕ್ತಿ ಗೀತೆಯೊಂದಿಗೆ ಪ್ರಾರಂಭವಾಗಿ, ಶಾಲಾ ವಿದ್ಯಾರ್ಥಿನಿ ಸಾನ್ವಿತ ಹಾಗೂ ಸಮನ್ವಿ ಎಲ್ಲರನ್ನು ಸ್ವಾಗತಿಸಿದರು.
ಶ್ರೇಯಸಿ ಹಾಗೂ ವಿಹಾನ್ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಹೆತ್ತವರು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು. ಸಾನಿಧ್ಯ ಹಾಗೂ ಆರುಹಿ ಧನ್ಯವಾದವನ್ನು ಅರ್ಪಿಸಿದರು.