
ಬೆಳ್ತಂಗಡಿ: ಉತ್ತರ ಕನ್ನಡದ ಕುಮಟಾ ಕೋನಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರನ್ನು ಆ. 18ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಭೇಟಿ ನೀಡಿ, ಪಾದುಕ ಪೂಜೆ ಮಾಡಿ ಗೌರವಾರ್ಪಣೆ ಸಲ್ಲಿಸಿದರು.
ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ ಕಲ್ಲಾಪು, ಉಪಾಧ್ಯಕ್ಷ ಸುಂದರ ಪೂಜಾರಿ, ಕಾರ್ಯದರ್ಶಿ ನಿತೇಶ್ಎಚ್., ಬಿಲ್ಲವ ಮಹಿಳಾ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜಿತಾ ವಿ. ಬಂಗೇರ, ಅಧ್ಯಕ್ಷೆ ಸುಮತಿ ಪ್ರಮೋದ್, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಂ. ಕೆ. ಪ್ರಸಾದ್, ಸಂಘದ ನಿರ್ದೇಶಕರು, ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು. ಸ್ವಾಮೀಜಿ ಇವರೆಲ್ಲರನ್ನು ಗೌರವಿಸಿದರು.