ಬಜಿರೆ: ಮಂಗಳತೇರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.16ರಂದು ನಿಟ್ಟಡೆ ಪಡ್ಡಂದಡ್ಕ ಕ್ಲಸ್ಟರಿನ ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ನಡೆಯಿತು.
ಎಸ್.ಡಿ.ಎಂ.ಸಿ ಅಧ್ಯಕ್ಷ ನಾರಾಯಣ ಗೌಡ ಪಂದ್ಯಾಟಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿ ಪ್ರಭಾಕರ ಹೆಗ್ಡೆ ಪಂದ್ಯಾಟಕ್ಕೆ ಶುಭ ಹಾರೈಸಿದರು.
ಪಂದ್ಯಾಟದ ಉದ್ಘಾಟನೆಗೆ ಮುಖ್ಯ ಅತಿಥಿಗಳಾಗಿ ಕುಕ್ಕೇಡಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷೆ ಕುಸುಮಾವತಿ, ಗ್ರಾಮ ಪಂಚಾಯಿತಿಯ ಸದಸ್ಯರಾದ ಗೋಪಾಲ್ ಶೆಟ್ಟಿ ಹಾಗೂ ಧನಂಜಯ ಕುಲಾಲ್, ಎಸ್.ಡಿ. ಎಮ್.ಸಿ ಅಧ್ಯಕ್ಷ ನಾರಾಯಣ ಗೌಡ, ಉಪಾಧ್ಯಕ್ಷ ಅಬ್ದುಲ್ ಲತೀಫ್, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಜಗನ್ನಾಥ ದೇವಾಡಿಗ, ಮಾಜಿ ಎಸ್.ಡಿ. ಎಮ್.ಸಿ ಅಧ್ಯಕ್ಷ ಚಂದ್ರಶೇಖರ ಭಟ್ ಕೊಂಕಣಾಜೆ, ಮಂಗಳತೇರು ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ವಿ. ಪ್ರಭಾಕರ ಹೆಗ್ಡೆ ಹಟ್ಟಾಜೆಗುತ್ತು, ಸಮೂಹ ಸಂಪನ್ಮೂಲ ವ್ಯಕ್ತಿ ಆರತಿ, ವಲಯ ನೋಡಲ್ ಪುಷ್ಪ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಕೋಶಾಧಿಕಾರಿ ರಾಜೇಶ್ ನೆಲ್ಯಾಡಿ ಉಪಸ್ಥಿತರಿದ್ದರು.