ವೇಣೂರು: ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಥ್ಯ ಸಂಕಲ್ಪ ಕಾರ್ಯಕ್ರಮ

0

ವೇಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ .ಟ್ರಸ್ಟ್ ಗುರುವಾಯನಕೆರೆ, ಅಖಿಲ ಭಾರತ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ರೋಟರಿ ಕ್ಲಬ್ ಪಲ್ಗುಣಿ ಸಿದ್ಧಕಟ್ಟೆ, ಲಯನ್ಸ್ ಕ್ಲಬ್ ವೇಣೂರು ಮತ್ತು ಎನ್.ಎಸ್.ಎಸ್ ಘಟಕ ಇದರ ಸಹಯೋಗದಲ್ಲಿ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಅಧ್ಯಕ್ಷತೆಯನ್ನು ಶಾಲಾ ಉಪಪ್ರಾಂಶುಪಾಲ ವೆಂಕಟೇಶ್ ಎಸ್. ತುಳುಪುಲೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ದುಶ್ಚಟಗಳ ದುರಭ್ಯಾಸಗಳ ಮುಂದಿನ ವಿದ್ಯಾರ್ಥಿ ಜೀವನದಲ್ಲಿ ಬರುವ ಎಡವು ತೊಡಕುಗಳ ಬಗ್ಗೆ ಮನಮುಟ್ಟುವಂತೆ ಅರಿವು ಮೂಡಿಸಿದರು.

ಸಮಾರಂಭದ ಉದ್ಘಾಟನೆಯನ್ನು ಶಾಲಾ ಎಸ್. ಡಿ. ಎಂ. ಸಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಜನ ಜಾಗೃತಿ ವೇದಿಕೆಯ ವಲಯ ಅಧ್ಯಕ್ಷ ಮೋಹನ್ ಅಂಡಿಂಜೆ ಪ್ರಾಸ್ತವಿಕವಾಗಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ವಲಯ ಅಧ್ಯಕ್ಷ ಗಿರೀಶ್ ಕೆ. ಎಸ್. ವೇಣೂರು ಒಕ್ಕೂಟದ ಅಧ್ಯಕ್ಷೆ ಸುಚಿತ್ರ ಹೆಗ್ಡೆ, ಲಯನ್ಸ್ ಕ್ಲಬ್ ನಿಕಟ ಪೂರ್ವ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಸಿದ್ದಕಟ್ಟೆ ರೋಟರಿ ಕ್ಲಬ್ ಕಾರ್ಯದರ್ಶಿ ಟೀನಾ ಡಿಕೊಸ್ಟ, ಯೋಜನೆಯ ವಲಯದ ಮೇಲ್ವಿಚಾರಕಿ ಶಾಲಿನಿ, ಸೇವಾಪ್ರತಿನಿಧಿ ಜಯಂತಿ ವೇಣೂರು ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆಯನ್ನು ಲೆವಿನಶ್ರೀ, ಸ್ವಾಗತವನ್ನು ರವೀಂದ್ರ, ಮೇಲ್ವಿಚಾರಕಿ ಶಾಲಿನಿ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here