ಕುವೆಟ್ಟು: ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಇದರ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಆ. 15ರಂದು ಶ್ರೀರಾಮ ಭಜನಾ ಮಂದಿರದ ವಠಾರದಲ್ಲಿ ಜರಗಿತು.
ಬೆಳಿಗ್ಗೆ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಎಂ. ರಘುರಾಮ ಭಟ್ ಮಠ ಅವರ ಪೂಜಾ ವೈಧಿಕ-ವಿದಾನಗಳನ್ನು ನಡೆಸಿ ಕಾರ್ಯಕ್ರಮಕ್ಕೆ ಹಾಗೂ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಂತರ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಮಹನೀಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು.
ಸಾಯಂಕಾಲ ಧಾರ್ಮಿಕ ಸಭಾ ಕಾರ್ಯಕ್ರಮ ಜರಗಿತು. ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಮನೋಹರ ಕೇದಳಿಕೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಧಾರ್ಮಿಕ ಭಾಷಣಗಾರರಾಗಿ ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯ ಶಿಕ್ಷಕ ಸುರೇಶ್ ಪೂಜಾರಿ ಬಟ್ಟೆಮಾರು ಅವರು ಮಾತನಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆಯನ್ನು ಮಾಡುವುದರೊಂದಿಗೆ ಧಾರ್ಮಿಕ ಆಚಾರ ವಿಚಾರ ನಮ್ಮೆಲ್ಲರಲ್ಲಿ ಉಳಿಯಲಿದೆ. ಶ್ರೀ ಕೃಷ್ಣನ ಅನುಗ್ರಹದಿಂದ ಎಲ್ಲರಿಗೂ ಸುಖ ಶಾಂತಿ ನೆಮ್ಮದಿ ಆರೋಗ್ಯ ಪ್ರಾಪ್ತಿಯಾಗಲಿ ಎಂದರು.
ವೇದಿಕೆಯಲ್ಲಿ ಶ್ರೀರಾಮ ಸೇವಾ ಸಮಿತಿಯ ಗೌರವ ಅಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು, ಪ್ರಧಾನ ಕಾರ್ಯದರ್ಶಿ ಪ್ರೀತಂ ಆಚಾರ್ಯ, ಕೋಶಾಧಿಕಾರಿ ಪ್ರದೀಪ್ ಕುಮಾರ್ ನೇರಳಕಟ್ಟೆ, ವಿಶ್ವ ಹಿಂದೂ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ, ವಿನೋದ್ ಶೆಣೈ ಮದ್ದಡ್ಕ ಉಪಸ್ಥಿತರಿದ್ದರು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು. ಅನ್ನದಾನ ಸೇವಕರ್ತಕ ದಾನಿಗಳನ್ನು ಗೌರವಿಸಲಾಯಿತು. ವಿಶೇಷವಾಗಿ ಮುದ್ದು ಮುದ್ದು ಕೃಷ್ಣ ಸ್ಪರ್ಧೆ ನಡೆಸಲಾಯಿತು. ಹಾಗೂ ವಿವಿಧ ಆಟೋ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನ ನೀಡಿದರು.
ಧೃತಿ ಮದ್ದಡ್ಕ ಅವರು ಪ್ರಾರ್ಥಿಸಿದರು. ಪ್ರಭಾಕರ ಶೆಟ್ಟಿ ಉಪ್ಪಡ್ಕ ಸ್ವಾಗತಿಸಿದರು. ಶ್ರೀರಾಮ ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಮದ್ದಡ್ಕ ಇದರ ಪದಾಧಿಕಾರಿಗಳು ಸರ್ವ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದರು. ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿ, ಶೈಲೇಶ್ ಭದ್ರಕಜೆ ಧನ್ಯವಾದವಿತ್ತರು. ವರದಿ; ಮನು ಮದ್ದಡ್ಕ