ಬೆಳ್ತಂಗಡಿ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ರಾಜ್ಯಮಟ್ಟದ ಆಂಚೆ-ಕುಂಚ ವಿಜೇತರಿಗೆ ಪುರಸ್ಕಾರ ಡಿ.ವೀರೇಂದ್ರ ಹೆಗ್ಗಡೆ ಆಡಳಿತಕ್ಕೊಳಪಟ್ಟ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಆ.19ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ 31ನೇ ವರ್ಷದ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ 22ನೇ ವರ್ಷದ ಪ್ರದಾನ ಸಮಾರಂಭ ನಡೆಯಿತು.
ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆಯನ್ನು ವಹಿಸಿದರು. ಮುಖ್ಯ ಅತಿಥಿಗಳಾಗಿ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರೀಯ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ರಾಜ್ಯ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ಸಾಹಿತಿಗಳು ನಿರ್ದೇಶಕರು ಡಾ. ವಿ. ನಾಗೇಂದ್ರ ಪ್ರಸಾದ್ ಪುಸ್ತಕಗಳನ್ನು ಬಿಡುಗಡೆಗೊಳಿಸಿದರು.
ಕಿರುತೆರೆ ಹಾಗೂ ಚಲನಚಿತ್ರ ನಟ ದತ್ತಣ್ಣ ಶುಭಾಶಂಸನೆ ಮಾಡಿದರು. ನಂತರ ಸ್ಪರ್ಧಾ ವಿಜೇತರಿಗೆ ಪುರಸ್ಕಾರ, ಕುಂಚ ಗಾನ ನೃತ್ಯ ವೈಭವ ನಡೆಯಿತು. ಸನಾತನ ನಾಟ್ಯಾಲಯ ಮಂಗಳೂರು ಇವರಿಂದ ನೃತ್ಯ ಹಾಗೂ ಚಿತ್ರ ಕಲಾವಿದ ರಮೇಶ್ ಇವರಿಂದ ಕುಂಚ ಕಾರ್ಯಕ್ರಮ ನೇರವೇರಿಸಿದರು.
ವಿದೂಷಿ ಕು. ಸುಪ್ರೀತಾ ಪ್ರಾರ್ಥಿಸಿದರು. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳಾಡಿದರು. ಪುದುವೆಟ್ಟು ಶ್ರೀ ಧ.ಮಂ. ಅನುದಾನಿತ ಹಿ.ಪ್ರಾ, ಶಾಲಾ ಶಿಕ್ಷಕ ನಿಶಾಂತ್ ಕಾರ್ಯಕ್ರಮ ನಿರೂಪಿಸಿದರು. ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ ಧನ್ಯವಾದವಿತ್ತರು.