
ಸೊಣಂದೂರು: ಸ. ಹಿ. ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ ವಿದ್ಯಾರ್ಥಿಗಳ ಪೋಷಕರು ಹಾಗೂ ವಿದ್ಯಾರ್ಥಿ ಸಂಘದ ಸಹಕಾರದೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಮಡಂತ್ಯಾರು ಸೇಕ್ರೆಟ್ ಹಾರ್ಟ್ ಅನುದಾನಿತ ಪ್ರೌಢ ಶಾಲೆಯ ನಿವೃತ್ತ ಪ್ರಾಂಶುಪಾಲ ಮೋಹನ್ ನಾಯಕ್ ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯ ಹೋರಾಟಗಾರರ ಛದ್ಮವೇಷ ಹಾಕಿದ ವಿದ್ಯಾರ್ಥಿಗಳೊಂದಿಗೆ ಶಾಲಾ ಎಲ್ಲ ವಿದ್ಯಾರ್ಥಿಗಳು, ಪೋಷಕರು, ಶಾಲಾಭಿಮಾನಿಗಳು, ಹಳೆ ವಿದ್ಯಾರ್ಥಿಗಳು ಪಥ ಸಂಚಲನವನ್ನು ನಡೆಸಿದರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುಂಜಾಲಕಟ್ಟೆ ಕೆ.ಪಿ.ಎಸ್. ಶಿಕ್ಷಕ ಧರಣೇಂದ್ರ ಕೆ., ಮಾಲಾಡಿ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್, ಸದಸ್ಯರಾದ ಬೇಬಿ ಸುವರ್ಣ, ಬೇಬಿ ಸುಝನ್ಹ, ಗುಲಾಬಿ, ಉಮೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರೋಷನ್ ಲೋಬೊ, ಮಹಮ್ಮಾಯಿಕಟ್ಟೆ ಫ್ರೆಂಡ್ಸ್ ನ ಅಧ್ಯಕ್ಷ ರಾಜೇಶ್ ಕುಲಾಲ್, ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷ ನಾಗೇಶ್ ಗೌಡ, ಸ್ಥಳೀಯರಾದ ಉಪೇಂದ್ರ ಆಚಾರ್ಯ, ಮುಖ್ಯ ಶಿಕ್ಷಕಿ ಅನಿತಾ ರೇಷ್ಮಾ ಡಿಸೋಜಾ ಉಪಸ್ಥಿತರಿದ್ದರು. ಶಾಲಾ ಮಕ್ಕಳೀಗೆ ಧರಣೇಂದ್ರ ಪಿ. ಅವರು ಎಲ್ಲಾ ವಿದ್ಯಾರ್ಥಿಗಳಿಗೆ ಐಡಿ ಹಾಗೂ ಮುಖ್ಯ ಶಿಕ್ಷಕಿ ಅನಿತಾ ರೇಷ್ಮಾ ಡಿಸೋಜ ಅವರು ಬೆಲ್ಟ್ ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತ್ ಮಾಲಾಡಿಯಿಂದ ಬಹುಮಾನವನ್ನು ನೀಡಿದರು.
ಶಾಲಾ ಹಳೆ ವಿದ್ಯಾರ್ಥಿಗಳು, ಪೋಷಕರು ಶಾಲಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಿ, ಸಹ ಶಿಕ್ಷಕಿ ರಶ್ಮಿ ಅವರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಅನಿತ ರೇಷ್ಮಾ ಡಿಸೋಜಾ ಸ್ವಾಗತಿಸಿದರು. ಶಾಲಾ ಸಹ ಶಿಕ್ಷಕಿ ರಕ್ಷಾ ಬಿ. ಕಾರ್ಯಕ್ರಮವನ್ನು ನಿರೂಪಿಸಿದರು. ಸಹ ಶಿಕ್ಷಕಿ ಸವಿತಾ ವಂದನಾರ್ಪಣೆಗೈದರು.