ಉಜಿರೆ: ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ಉಜಿರೆಯ ಸಾನಿಧ್ಯ ತರಬೇತಿ ಸಂಸ್ಥೆಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ ಮಾಡಲಾಯಿತು. ಸಂಸ್ಥೆಗೆ ಮಂಜುಶ್ರೀ ಸೀನಿಯರ್ ಛೇಂಬರ್ ನಿಂದ ಸ್ಟೀಲ್ ಕಪಾಟನ್ನು ಕೊಡುಗೆಯಾಗಿ ನೀಡಿದರು.
ಸೀನಿಯರ್ ಛೇಂಬರ್ ಅಧ್ಯಕ್ಷ ಮಂಜುನಾಥ ರೈ, ಸ್ಥಾಪಕ ಅಧ್ಯಕ್ಷ ಪ್ರಮೋದ್ ಆರ್. ನಾಯಕ್, ಸದಸ್ಯ ಪುಷ್ಪರಾಜ್ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಮೇಲ್ವಿಚಾರಕಿ ಮಲ್ಲಿಕಾ, ಸಲಹೆಗಾರ ಪ್ರೇಮ್ ರಾಜ್ ರೋಷನ್ ಸಿಕ್ವೆರಾ ಶಿಕ್ಷಕ ವೃಂದ, ಮಕ್ಕಳು ಹಾಜರಿದ್ದರು.