ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇದರ ಆಂತರಿಕ ಗುಣಮಟ್ಟ ಬರವಸ ಕೋಷ, ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್ ರೆಂಜರ್ಸ್ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕ ಇವುಗಳ ಸಂಯುಕ್ತ ಸಹಯೋಗದಲ್ಲಿ “ನಮ್ಮ ನಡೆ ಗದ್ದೆಯ ಕಡೆ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಆ.19ರಂದು ಹಳೆಕೋಟೆಯ ದೊಡ್ಡಮನೆ ಸತೀಶ್ ಶೆಟ್ಟಿ ಅವರ ಗದ್ದೆಯಲ್ಲಿ ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳ ಮನರಂಜನಯೊಂದಿಗೆ, ಆಟ, ಊಟ, ಓಟ ಎಲ್ಲವನ್ನು ನಿಭಾಯಿಸಲು ಕಲಿತ ಸಂತೃಪ್ತಿಯ ದಿನ ಇದಾಗಿತ್ತು. ಈ ವಿಶೇಷ ಕಾರ್ಯಕ್ರಮದಲ್ಲಿ ಓಟ, ಮೂಟೆ ಹೊರುವುದು, ಹಾಳೆಯಲ್ಲಿ ಎಳೆಯುವುದು, ನಿಧಿ ಶೋಧ, ಹಗ್ಗ ಜಗ್ಗಾಟ ಮತ್ತು ವಾಲಿಬಾಲ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಪ್ರೊ. ಪದ್ಮನಾಭ ಕೆ. ಪ್ರಾಸ್ತಾವಿಕ ನುಡಿಗಳನ್ನು ಆಡಿ ವಿದ್ಯಾರ್ಥಿಗಳಿಗೆ ತುಳು ನಾಡಿನ ಸಂಸ್ಕೃತಿ, ಮಣ್ಣಿನ ಮಹತ್ವ ಮತ್ತು ಕ್ರೀಡಾ ಸ್ಪೂರ್ತಿಯ ಬಗ್ಗೆ ವಿವರಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಪ್ರಾಂಶುಪಾಲ ಪ್ರೊ. ಸುರೇಶ್ ವಿ. ವಿದ್ಯಾರ್ಥಿಗಳು ಅನುಸರಿಸಬೇಕಾದ ಜಾಗೃತಿಗಳನ್ನು ತಿಳಿಸಿದರು. ಗದ್ದೆಯ ಮಾಲಕ ಸತೀಶ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮ ಆಯೋಜಕ ಯವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ರೊವರ್ ಸ್ಕೌಟ್ ಲೀಡರ್ ಡಾ. ರವಿ ಎಂ. ಎನ್. ಸ್ಪರ್ಧೆಗಳ ನೀತಿಗಳನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಐ.ಕ್ಯೂ.ಎ.ಸಿ ಸಂಚಾಲಕ ಡಾ. ಕುಶಾಲಪ್ಪ ಎಸ್. ಮತ್ತು ರೇಂಜರ್ ಲೀಡರ್ ಡಾ. ರಾಜೇಶ್ವರಿ ಎಚ್. ಎಸ್. ಉಪಸ್ಥಿತರಿದ್ದರು.
ಸತೀಶ್ ಶೆಟ್ಟಿ ಕುಟುಂಬದವರ ಸಹಕಾರವನ್ನು ಸ್ಮರಿಸಿ ಗೌರವಿಸಲಾಯಿತು. ಕಾಲೇಜಿನ ಎಲ್ಲಾ ಅಧ್ಯಾಪಕ ವೃಂದ, ಬೋಧಕೇತರ ವೃಂದ ಮತ್ತು ಕ್ರೀಡಾ ಸಂಘದ ವಿದ್ಯಾರ್ಥಿಗಳು ಸೇರಿ ಕಾರ್ಯಕ್ರಮದ ಆಟೋಟಗಳನ್ನು ನಡೆಸಿಕೊಟ್ಟರು. ಪ್ರೊ. ವಿಜಯಲಕ್ಷ್ಮಿ ಪ್ರಾರ್ಥನೆ ಮಾಡಿದರು. ವಿದ್ಯಾರ್ಥಿ ಕ್ರತಿಕ್ ಎಲ್ಲರನ್ನು ಸ್ವಾಗತಿಸಿದರು. ವಿದ್ಯಾರ್ಥಿನಿ ಶುಭವತಿ ಕಾರ್ಯಕ್ರಮವನ್ನು ನಿರೂಪಿಸಿದರು.
ಸಂದೇಶ ವಂದಿಸಿದರು.