Site icon Suddi Belthangady

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆ ಪದವಿ ಪೂರ್ವ ವಿಭಾಗದಲ್ಲಿ “ಸದ್ಭಾವನಾ ದಿನಾಚರಣೆಯ” ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್.ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ಪೂರ್ವ ವಿಭಾಗದಲ್ಲಿ ಸದ್ಭಾವನಾ ದಿನಾಚರಣೆಯನ್ನು ಆಚರಿಸಲಾಯಿತು.

ಜಾತಿ, ಧರ್ಮ, ಭಾಷೆ, ಪ್ರಾದೇಶಿಕತೆಗಳ ಹೆಸರಿನಲ್ಲಿ ಒಡೆದು ಹೋಗುತ್ತಿರುವ ನಮ್ಮ ದೇಶಕ್ಕೆ ಏಕತೆ ತಂದು ಕೊಡುವುದೇ ಈ ಸೌಹಾರ್ದತೆ ಮತ್ತು ಸದ್ಭಾವನೆ ಎಂದು ಪದವಿ ಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ ಎನ್. ಅವರು ಸದ್ಭಾವನಾ ದಿನಾಚರಣೆಯ ಮಹತ್ವವನ್ನು ತಿಳಿಸಿಕೊಟ್ಟರು.

ವಿದ್ಯಾಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ, ಸಂಯೋಜಕ ಯಶವಂತ್ ಜಿ. ನಾಯಕ್, ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಉಪನ್ಯಾಸಕಿ ಸಂಧ್ಯಾ ಪ್ರತಿಜ್ಞಾ ವಿಧಿಯನ್ನು ನಡೆಸಿಕೊಟ್ಟರು.

Exit mobile version