Site icon Suddi Belthangady

ಬೆಳ್ತಂಗಡಿ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಸದ್ಭಾವನ ದಿನಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಬನ್ನಿಸ್, ಕಬ್ಸ್ ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಸದ್ಭಾವನ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಗೈಡ್ ವಿದ್ಯಾರ್ಥಿ ಅನಘ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ವಾಚಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ರವರ ಆದೇಶದೊಂದಿಗೆ, ಮುಖ್ಯ ಶಿಕ್ಷಕಿ ಹೇಮಲತಾ ಎಂ.ಆರ್. ಸೂಚನೆಯಂತೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳಾ ಪೂಜಾರಿ ಕಾರ್ಯಕ್ರಮವನ್ನು ಸಂಘಟಿಸಿದರು. ಶಿಕ್ಷಕರುಗಳಾದ ಮಂಜುನಾಥ್, ರಮ್ಯ ಬಿ.ಎಸ್., ಗೀತ ಪಿ., ನೀತಾ ಕೆ.ಎಸ್., ಪ್ರಮೀಳಾ ಎನ್., ಜಯಲಕ್ಷ್ಮಿ, ಕಾರುಣ್ಯ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Exit mobile version