
ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಆದೇಶದಂತೆ ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್- ರೇಂಜರ್ಸ್ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಯಲ್ಲಿ ಸಧ್ಭಾವನಾ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ವಿಷ್ಣುಪ್ರಕಾಶ್ ಎ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಎನ್. ಎಸ್. ಎಸ್. ಕಾರ್ಯಕ್ರಮಾಧಿಕಾರಿಗಳಾದ ದಿನೇಶ್, ಶ್ರಾವ್ಯ ಮತ್ತು ರೋವರ್ಸ್ ಲೀಡರ್ ಬೆಳಿಯಪ್ಪ ಕೆ., ರೇಂಜರ್ಸ್ ಲೀಡರ್ ರಕ್ಷಾ ಉಪಸ್ಥಿತರಿದ್ದರು.