ಬೆಳ್ತಂಗಡಿ :ಶ್ರೀ ಗುರುದೇವ ಎಜುಕೇಶನ್ ಟ್ರಸ್ಟ್ ಬೆಳ್ತಂಗಡಿ, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇದರ ರಾಷ್ಟ್ರೀಯ ಸೇವಾ ಯೋಜನ ಘಟಕದ ಆಶ್ರಯದಲ್ಲಿ ಸದ್ಭಾವನ ದಿನವನ್ನಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಸವಿತಾ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಚನಾಧಿಕಾರಿ ಶಮಿವುಲ್ಲಾ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಸಹಯೋಜನಾಧಿಕಾರಿ ಅಂಬಿಕಾ, ರಾಷ್ಟ್ರೀಯ ಸೇವಾ ಯೋಜನೆಯ ನಾಯಕಿ ಚಂದನ ಉಪಸ್ಥಿತರಿದ್ದರು. ಸಹ ಯೋಜನಧಿಕಾರಿ ಸತೀಶ್ ಸಾಲ್ಯಾನ್ ಧನ್ಯವಾದ ಸಲ್ಲಿಸಿದರು.