
ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇವರ ಆಶ್ರಯದಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಆ. 19ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲೆಗಳ ಕರಾಟೆ ಪಂದ್ಯಾಟದಲ್ಲಿ ಬೆಳ್ತಂಗಡಿಯ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಅಂಜು ಮರಿಯ(8ನೇ) ಮತ್ತು ಶಮಂತ್ (9ನೇ) ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕ, ಗುರುಗಳು ವೋಲ್ಟರ್ ಡಿಮೆಲ್ಲೋ ಅವರು ಹಾಗೂ ಮುಖ್ಯೋಪಾಧ್ಯಾಯ ಗುರು ಕ್ಲಿಫರ್ಡ್ ಪಿಂಟೋ ಅವರು ಅಭಿನಂದಿಸಿದರು.