
ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ – ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ
ಇವರ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಹಾಗೂ ಪ್ರಾಥಮಿಕ ಬಾಲಕ – ಬಾಲಕಿಯರ ಹ್ಯಾಂಡ್ ಬಾಲ್ ಪಂದ್ಯಾಟ ಆ.23ರಂದು ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ ಎಂದು ಮುಖ್ಯೋಪಾಧ್ಯಾಯ ಕ್ಲಿಫರ್ಡ್ ಪಿಂಟೊ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.