
ಬೆಳ್ತಂಗಡಿ: ಶ್ರೀ ಗುರುದೇವ ಎಜುಕೇಶನ್ ಟ್ರಸ್ಟ್, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಇದರ ಆಶ್ರಯದಲ್ಲಿ ಸೈಬರ್ ಕ್ರೈಂ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸಂಪನ್ಮೂಲ ವ್ಯಕ್ತಿಯಾಗಿ ಮಂಜುನಾಥ ಆರ್.ಜಿ, ಮಂಗಳೂರು, ಬಂದರು ಸೈಬರ್ ಕ್ರೈಂ ಪೊಲೀಸ್ ಸ್ಟೇಷನ್ ಡಿ.ವೈ.ಎಸ್.ಪಿ. ಅವರು ಸೈಬರ್ ಕ್ರೈಂ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ವಹಿಸಿದ್ದರು. ಮಂಗಳೂರು, ಬಂದರು ಸೈಬರ್ ಕ್ರೈಂ ಪೊಲೀಸ್ ಸ್ಟೇಷನ್ ನ ಅಜಿತ್, ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್, ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಪ್ರದ್ವಿತ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಾಣಿಜ್ಯ ಶಾಸ್ತ್ರ ಮುಖ್ಯಸ್ಥ ಶಮಿ ವುಲ್ಲಾ ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಬಬಿತ ಧನ್ಯವಾದ ಅರ್ಪಿಸಿದರು.