ಬೆಳ್ತಂಗಡಿ: ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 2024-25ನೇ ಸಾಲಿನ ಮಹಾಸಭೆಯು ಆ.23ರಂದು ಬೆಳಗ್ಗೆ 11 ಗಂಟೆಗೆ ಸಂಘದ ಅಧ್ಯಕ್ಷ ಭಗೀರಥ ಜಿ. ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಕೇಂದ್ರ ಕಚೇರಿಯ ಶ್ರೀ ಗುರುಸಾನಿಧ್ಯ ಸಭಾಭವನದಲ್ಲಿ ನಡೆಯಲಿದೆ.
ಮಧ್ಯಾಹ್ನ 2ರಿಂದ ಗಾನಸುರಭಿ ರವಿಚಂದ್ರ ಕನ್ನಡಿಕಟ್ಟೆ ಇವರ ಸಾರಥ್ಯದಲ್ಲಿ ಯಕ್ಷಗಾನ, ಹಾಸ್ಯ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ವಿಶೇಷಾಧಿಕಾರಿ ಎಂ. ಮೋನಪ್ಪ ಪೂಜಾರಿ ಕಂಡೆತ್ಯಾರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ತಿಳಿಸಿದ್ದಾರೆ.