Site icon Suddi Belthangady

ಕಕ್ಯಪದವು: ಎಲ್.ಸಿ.ಆರ್. ವಿದ್ಯಾಸಂಸ್ಥೆ ಪದವಿ ವಿಭಾಗದ ವಿದ್ಯಾರ್ಥಿ‌‌ ಸಂಘ ಉದ್ಘಾಟನಾ ಸಮಾರಂಭದೊಂದಿಗೆ ಸ್ವಾಗತ ಕಾರ್ಯಕ್ರಮ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯೊಂದಿಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡುವುದರೊಂದಿಗೆ ಪ್ರಥಮ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸಂಸ್ಥೆಯ ಸಂಯೋಜಕ ಯಶವಂತ್ ಜಿ. ನಾಯಕ್ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ, ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ವಿದ್ಯಾರ್ಥಿ ಶಕ್ತಿಯು ಅನಾವರಣಗೊಳ್ಳಬೇಕಾದರೆ ಸಾಂಘಿಕ ಪ್ರಯತ್ನಗಳು ಸಂಘದ ಮೂಲಕ ನಡೆಯಬೇಕು. ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು, ಜ್ಞಾನವನ್ನು ಸಂಪಾದಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.

ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ ಮಾತನಾಡಿ, ಪಠ್ಯೇತರ ಚಟುವಟಿಕೆಗಳ ಮಹತ್ವ ಹಾಗೂ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯ ಬಗ್ಗೆ ವಿವರಿಸಿದರು. ವಿದ್ಯಾಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಪರಿಷತ್ ಸದಸ್ಯರನ್ನು ಅಭಿನಂದಿಸಿ, ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ, ಶಿಸ್ತು ಮತ್ತು ಹೊಣೆಗಾರಿಕೆಯ ಮಹತ್ವವನ್ನು ತಿಳಿಸಿ ಪ್ರಾಮಾಣಿಕತೆ ಹಾಗೂ ಸಮರ್ಪಣೆಯಿಂದ ಕೆಲಸ ಮಾಡುವಂತೆ ಪ್ರೋತ್ಸಾಹಿಸಿದರು.

ದ್ವಿತೀಯ ಪದವಿ ವಿಭಾಗದ ವಿದ್ಯಾರ್ಥಿ ದೀಕ್ಷಿತ್ ಕೆ. ಸ್ವಾಗತಿಸಿದರು.ತೃತೀಯ ವಿಭಾಗದ ವಿದ್ಯಾರ್ಥಿ ಸುಪ್ರಿಯಾ ಹಾಗೂ ಸುರಕ್ಷಾ ಕಾರ್ಯಕ್ರಮವನ್ನು ನಿರೂಪಿಸಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಿದರು. ಬೋಧಕ ಬೋಧಕೇತರ ವೃಂದದವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಸಂಪನ್ನಗೊಂಡಿತು. ತೃತೀಯ ವಿಭಾಗದ ವಿದ್ಯಾರ್ಥಿ ಸಂಚಿತ್ ವಂದಿಸಿದರು.

Exit mobile version