ಮುಂಡಾಜೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚಾರ್ಮಾಡಿ ಶಾಖೆಯ ಉದ್ಘಾಟನೆ ಸಮಾರಂಭ ಆ.25ರಂದು ಚಾರ್ಮಾಡಿ ಶಾಖಾ ಕಟ್ಟಡದ ಸಮೀಪದ ಪಂಚ ಶ್ರೀ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಮುಂಡಾಜೆ ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷ ಕೆ. ಪ್ರಕಾಶ್ ನಾರಾಯಣ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ, ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷೆ ಶಾರದಾ, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಬಿ.ವಿ, ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಕೇಶವ ಮೂಲ್ಯ, ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಡಳಿತ ಮೊಕೇಸರಾದ ಪ್ರಕಾಶ್ ಹೊಸಮಠ, ಚಾರ್ಮಾಡಿಯ ಹಿರಿಯ ಸದಸ್ಯ ಅನಂತ ರಾವ್, ಮೂಸೆ ಕುಂಞ, ಕಾಂತಪ್ಪ ಗೌಡ ಅಡಿಮಾರು ಉಪಸ್ಥಿತಿ ಇರಲಿದ್ದಾರೆ ಎಂದು ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಪರಾಂಜಪೆ ತಿಳಿಸಿದ್ದಾರೆ.