ಮುಂಡಾಜೆ: ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಿ ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡುವ ‘ಸದ್ಭಾವನಾ ದಿನಾಚರಣೆ’ಯನ್ನು ಮುಂಡಾಜೆ ಪದವಿ ಪೂರ್ವ ಕಾಲೇಜಿನ ರೋವರ್ಸ್ & ರೇಂಜರ್ಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸಹಯೋಗದಲ್ಲಿ ಆಚರಿಸಲಾಯಿತು. ರೇಂಜರ್ ಲೀಡರ್ ವಸಂತಿ ಅವರು ಸದ್ಭಾವನಾ ದಿನದ ಪ್ರಸ್ತುತ ಮಹತ್ವವನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲೆ ಗೀತಾ ಅವರು ‘ಸದ್ಭಾವನಾ ದಿನಾಚರಣೆ’ಯ ಪ್ರತಿಜ್ಞೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
ಮುಂಡಾಜೆ: ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ
