
ಬೆಳ್ತಂಗಡಿ: ನದಿಯ ಕಡೆ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬರು ನದಿ ದಡದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಆ.21ರಂದು ನಡೆದಿದೆ.

ಮುಂಡಾಜೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಚೆನ್ನಿಗುಡ್ಡೆ ನಿವಾಸಿ ಪೂವಪ್ಪ ನಾಯ್ಕ(70) ಸಾವಿಗೀಡಾದ ವ್ಯಕ್ತಿಯಾಗಿದ್ದಾರೆ.
ಮುಂಡ್ರುಪ್ಪಾಡಿ ಸೇತುವೆಯ ಮೃತ್ಯುಂಜಯ ನದಿಗೆ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ. ಮೃತರು ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.
ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.