Site icon Suddi Belthangady

ಆ.26ರವರೆಗೆ ಸಂತೆಕಟ್ಟೆಯ SDM ಕಲಾಭವನದಲ್ಲಿ ರಾಜಸ್ಥಾನ ಆರ್ಟ್ ಆ್ಯಂಡ್ ಕ್ರಾಫ್ಟ್ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ: ಇನ್ನು ಕೇವಲ 4 ದಿನಗಳು ಮಾತ್ರ ಬಾಕಿ: ಸೀರೆಗಳ ಆಕರ್ಷಕ ಸಂಗ್ರಹ

ಬೆಳ್ತಂಗಡಿ: ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ಅವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಹಾಗೂ ಅಭರಣಗಳ ಮತ್ತು ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟದ ರಾಜಸ್ಥಾನ ಬೃಹತ್ ಮಾರಾಟ ಮೇಳವು ನಗರದ ಸಂತೆಕಟ್ಟೆಯ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾಭವನದಲ್ಲಿ ಆ.14ರಂದು ಆರಂಭಗೊಂಡಿದ್ದು, ಗ್ರಾಹಕರ ಆಕರ್ಷಣೆಯ ಕೇಂದ್ರವಾಗಿ ಆ.26ರವರೆಗೆ ನಡೆಯಲಿದೆ.

ಗ್ರಾಹಕರ ಅನುಕೂಲ ಸೇವೆಗೆಂದು ಬೆಳಗ್ಗೆ 9ರಿಂದ ರಾತ್ರಿ 9ಗಂಟೆವರೆಗೆ ತೆರೆದಿರುವ ಈ ಗ್ರಾಮೀಣ ಮೇಳದಲ್ಲಿ ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳ ಕೈಮಗ್ಗದ ಸೀರೆ, ಸಿಲ್ಕ್ ಸೀರೆಗಳು ಮತ್ತು ಕರಕುಶಲ ವಸ್ತುಗಳ ಬೃಹತ್ ಸಂಗ್ರಹವಿದ್ದು, ಮಾರಾಟ ಮತ್ತು ಪ್ರದರ್ಶನ ನಡೆಯುತ್ತಿದೆ. ರಾಜಸ್ಥಾನ ಸಿಲ್ಕ್ ಸಾರಿ, ಮೈಸೂರ್ ಸಿಲ್ಕ್ ಸಾರಿ, ಒರಿಸ್ಸಾ ಸಿಲ್ಕ್ ಸೀರೆಗಳು, ಕಾಂತವರ್ಕ್ ಸಿಲ್ಕ್ ಸೀರೆಗಳು, ಕೋಸಿಯಾ ಕೈ ಮಗ್ಗದ ಸೀರೆಗಳು, ಬಾಗಲ್ಪುರ್ ಸಿಲ್ಕ್ ಸೀರೆಗಳು, ಬನರಸ್ ಸಿಲ್ಕ್ ಸಾರಿ, ವೆಜ್ ಡೈ ಬ್ಲಾಕ್ ಪ್ರಿಂಟೆಡ್ ಸೀರೆಗಳು, ಮಧುರೈ ಸುಗುಡಿ ಕಾಟನ್ ಸೀರೆಗಳು, ಸಾಂಬ್ಲಪುರಿ ಇಕ್ತಾ ಸೀರೆಗಳು, ಕೈಮಗ್ಗದ ಕಾಟನ್ ಸೀರೆಗಳು, ಚಾಂದಾರ್ ಕಾಟನ್ ಸೀರೆಗಳು, ಪೌಂಚಪಲ್ಲಿ ಕೈಮಗ್ಗದ ಸೀರೆಗಳು, ಫೋಲ್ಕರಿ ವಿನ್ಯಾಸದ ಪಾಟಿಯಾಲ, ಫೋಲ್ಕರಿ ಬೆಡ್‌ಶೀಟ್‌ಗಳು ಹಾಗೂ ಸೋಫಾ ಸೆಟ್ ಕವರ್, ಸಿಲ್ಕ್ ಕುಶನ್ ಕವರ್, ರಾಜಸ್ಥಾನ್ ಬೆಡ್‌ಶೀಟ್‌ಗಳು ಹಾಗೂ ಇನ್ನಿತರ ಕೈಮಗ್ಗದ ಸೀರೆಗಳು ಲಭ್ಯವಿದೆ.

ಜೋಧ್‌ಪುರ್ ಕರಕುಶಲ ಮರದ ಪೀಠೋಪಕರಣಗಳು, ಸಾರಂಗ್ಟುರ್ ಮರದ ಪಿಠೋಪಕರಣಗಳು, ಹೈದರಬಾದ್ ಕಪ್ಪು ಮೆಟಲ್ ವಿಗ್ರಹಗಳು, ಹಿತ್ತಳೆಯ ಕಲಾಕೃತಿಗಳು, ವಿಶೇಷ ಶೈಲಿಯ ಜೈಪುರ್ ಆಭರಣಗಳು, ವಿಶೇಷ ವಿನ್ಯಾಸದ ವೈವಿಧ್ಯಮಯ ಮಣ್ಣಿನ ವಿಗ್ರಹಗಳು, ನೀಲಿ ಬಣ್ಣದ ಕ್ರಾಕರಿ ವಸ್ತುಗಳ ಬೃಹತ್ ಸಂಗ್ರಹಗಳಿವೆ ಎಂದು ಮೇಳದ ಆಯೋಜಕ ಪ್ರಮೋದ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version