
ಬೆಳ್ತಂಗಡಿ: ಆ. 21ರಂದು ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು- ಗುರುವಾಯನಕೆರೆ ಇದರ ಸಹಯೋಗದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ 14ರ ವಯೋಮಾನದ ಬಾಲಕ – ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳಾದ ಮಾನ್ವಿ ಎಂ.ಎಸ್., ವಿ.ವಿಖ್ಯಾತ್ ರಾಜ್ ಹಾಗೂ ಜೆ.ಪಿ ಜಿತೇಶ್ ಗೌಡ ಅವರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.