ಬೆಳ್ತಂಗಡಿ: ಆ. 21ರಂದು ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು- ಗುರುವಾಯನಕೆರೆ ಇದರ ಸಹಯೋಗದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ 14ರ ವಯೋಮಾನದ ಬಾಲಕ – ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳಾದ ಮಾನ್ವಿ ಎಂ.ಎಸ್., ವಿ.ವಿಖ್ಯಾತ್ ರಾಜ್ ಹಾಗೂ ಜೆ.ಪಿ ಜಿತೇಶ್ ಗೌಡ ಅವರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ
