ಬೆಳ್ತಂಗಡಿ: ತಾಲೂಕಿನ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ವಾಹನ ಸವಾರರಿಗೆ ತೀವ್ರ ಸಂಕಷ್ಟ ಉಂಟಾಗಿದ್ದು ಈ ಕುರಿತಾಗಿ ಸದನದಲ್ಲಿ ಸರ್ಕಾರದ ಗಮನ ಸೆಳೆದು ತಕ್ಷಣವೇ ಈ ರಸ್ತೆಯನ್ನು ಅಭಿವೃದ್ಧಿಪಡಿಸಲು ಅನುದಾನವನ್ನು ಬಿಡುಗಡೆಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ಶಾಸಕ ಹರೀಶ್ ಪೂಂಜಾ ಅವರು ವಿನಂತಿಸಿದರು.
ಆ. 22ರಂದು ಸದನದಲ್ಲಿ ಲೋಕೋಪಯೋಗಿ ಸಚಿವರ ಅನುಪಸ್ಥಿತಿಯಲ್ಲಿ ರಾಜ್ಯದ ಗೃಹ ಸಚಿವರಾದ ಜಿ. ಪರಮೇಶ್ವರ್ ಅವರು ಉತ್ತರಿಸಿ, ಮಳೆ ನಿಂತ ಕೂಡಲೇ ಅನುದಾನವನ್ನು ಒದಗಿಸಿ ಕಾಮಗಾರಿಯನ್ನು ಆರಂಭಿಸುವುದಾಗಿ ಆಶ್ವಾಸನೆ ನೀಡಿದರು.