ಮಡಂತ್ಯಾರು: ತಾಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ಕರಾಟೆ ಸ್ಪರ್ಧೆಯು ಆ. 21ರಂದು ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು – ಗುರುವಾಯನಕೆರೆಯಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 14ರ ವಯೋಮಾನದ 7ನೇ ತರಗತಿಯ ವಿದ್ಯಾರ್ಥಿನಿಯಾದ ರಿಹಾ ಫಾತಿಮಾ ಅವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಹಾಗೂ 7ನೇ ತರಗತಿಯ ಮೊಹಮ್ಮದ್ ರಝೀನ್ ಅವರು ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಕರಾಟೆ ತರಬೇತುದಾರ ಅಶೋಕ್ ಆಚಾರ್ಯ ಅವರು ತರಬೇತಿಯನ್ನು ನೀಡಿರುತ್ತಾರೆ. ಹಾಗೂ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜ ಮತ್ತು ಮಂಜುನಾಥ ಅವರು ಸಹಕಾರ ನೀಡಿರುತ್ತಾರೆ.