Site icon Suddi Belthangady

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ-ರೂ.164 ಕೋಟಿ ವ್ಯವಹಾರ, ರೂ.72.70ಲಕ್ಷ ನಿವ್ವಳ ಲಾಭ-ಶೇ.16 ಡಿವಿಡೆಂಟ್ ಘೋಷಣೆ

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ 2024-25ನೇ ಸಾಲಿನ 16ನೇ ವಾರ್ಷಿಕ ಮಹಾಸಭೆ ಆ. 23ರಂದು ಲ್ಯಾಲ ಜ್ಯೋತಿ ಹಾಸ್ಪಿಟಲ್ ಬಳಿ ಇರುವ ಸಂಗಮ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಅನಿಲ್ ಎ.ಜೆ. ರವರ ಅಧ್ಯಕ್ಷತೆಯಲ್ಲಿ ಜರುಗಿತು. 2024-25 ನೇ ಸಾಲಿನಲ್ಲಿ ರೂ. 164 ಕೋಟಿ ವ್ಯವಹಾರ ನಡೆಸಿ ನಿವ್ವಳ ರೂ. 72.70ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ.16 ರಷ್ಟು ಡಿವಿಡೆಂಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಎ.ಜೆ ರವರು ತಿಳಿಸಿದರು.

ಸಂಘದ ಉಪಾಧ್ಯಕ್ಷ ಜಾರ್ಜ್ ಎಮ್. ವಿ ಅವರು ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೋಜ್ ಪಿ.ಎ 2024-25 ಸಾಲಿನ ಲೆಕ್ಕ ಪತ್ರವನ್ನು ಮಂಡಿಸಿದರು. ನಿರ್ದೇಶಕರಾದ ಸೆಭಾಸ್ಟೀನ್ ವಿ.ಟಿ, ಜ್ಯೆಸನ್ ಪಟ್ಟೇರಿಲ್, ಅಂದಾನಿ ಕೆ.ಡಿ, ಬಾಬು ತೋಮಸ್, ಬಿಜು ಪಿ.ಪಿ., ಬಿಜು ಎಮ್.ಜೆ., ಸೆಭಾಸ್ಟೀನ್, ಸೋಪಿ ಜೋಸೆಫ್, ಫಿಲೋಮಿನಾ ವಿ. ಉಪಸ್ಥಿತರಿದ್ದರು.

ಬೆಳ್ತಂಗಡಿ ಮತ್ತು ಕಡಬ ತಾಲೂಕಿನಲ್ಲಿರುವ ನಮ್ಮ ಸಂಘದ ಸದಸ್ಯರುಗಳ ಮಕ್ಕಳು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಶೇಕಡಾ 95ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಮಕ್ಕಳನ್ನು ಸಂಘ ಅಭಿನಂದಿಸಲಾಯಿತ್ತು. ಸಂಘದ ಸದಸ್ಯರುಗಳಾಗಿದ್ದ ಮಾಜಿ ಸೈನಿಕರನ್ನ ಗುರುತಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಯಶ್ವಸಿಯಾಗಿ ನಡೆಸಲು ಸಿಬ್ಬಂದಿ ವರ್ಗದವರು ಸಹಕರಿಸಿದರು. ಶಾಖಾ ವ್ಯವಸ್ಥಾಪಕರಾದ ಸುಜಾ ಜೇಮ್ಸ್ & ರೇಷ್ಮಾ ಅಬ್ರಾಹಂ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ನಿರ್ದೇಶಕ ಸೆಭಾಸ್ಟೀನ್ ಬಂಗಾಡಿಯವರು ವಂದಿಸಿದರು.

Exit mobile version