Site icon Suddi Belthangady

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ

ಉಜಿರೆ :ಆ23 ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಪ್ರೌಢಶಾಲ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಎಸ್‌.ಡಿ.ಎಂ ಐ.ಟಿ. ಕಾಲೇಜಿನ ಮುಖ್ಯ ಗ್ರಂಥಪಾಲಕ ಡಾ.ರಜತ ಅವರು ಪುಸ್ತಕ ವಿಮರ್ಶೆ, ಲೇಖನ ಬರಹ, ವರದಿ ತಯಾರಿಯ ಕುರಿತಾದ ವಿಸ್ತೃತ ಮಾಹಿತಿ ಹಂಚಿಕೊಂಡರು.

ಕಾರ್ಯಗಾರದಲ್ಲಿ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ. ಅಧ್ಯಕ್ಷತೆ ವಹಿಸಿದ್ದರು. ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು. ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದರು.

Exit mobile version