ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದಿರುವ ಮುಸುಕುಧಾರಿಯನ್ನು ಆ.23ರಂದು ಎಸ್. ಐ. ಟಿ ಅಧಿಕಾರಿಗಳು ಬಂಧಿಸಿದ ಬೆನ್ನಲ್ಲೆ ಕೋರ್ಟ್ ಗೆ ಹಾಜರುಪಡಿಸಿದ ನಂತರ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಹೆಚ್ ಅವರು ಹತ್ತು ದಿನಗಳ ಕಾಲ ಎಸ್. ಐ. ಟಿ. ಕಸ್ಟಡಿಗೆ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಒದಗಿಸಲಾಗಿದೆ.
ಸರ್ಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ದಿವ್ಯ ರಾಜ್ ಹೆಗ್ಡೆ ಪುತ್ತೂರು ವಾದ ಮಂಡಿಸಿದ್ದರು.