
ವೇಣೂರು: ಬೆಂಗಳೂರು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ಸ್ವಾತಂತ್ರ್ಯ ಚಳುವಳಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ನಾಲ್ಕನೇ ವರ್ಷದ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಸಿಂಚನ ಮತ್ತು ನಿಶಾ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಶ್ರುತಾ ದ್ವಿತೀಯ ಸ್ಥಾನವನ್ನು ಅನ್ವಿತ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆಗೆ ಆಯ್ಕೆಯಾಗಿರುತ್ತಾರೆ. ಇವರನ್ನು ಶಾಲಾ ಎಸ್. ಡಿ. ಎಂ. ಸಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಅಭಿನಂದಿಸಿದರು.