ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಅನಂತೋಡಿ ಸೆ. 6ರಂದು ನಡೆಯಲಿರುವ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆಯನ್ನು ಆ. 24ರಂದು ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಭೆಯಲ್ಲಿ ದೇವಸ್ಥಾನದ ಆಡಳಿತ ಮೋಕ್ತೇಸರ ಜೀವಂದರ್ ಕುಮಾರ್ ಜೈನ್ ಬೆಳಾಲುಗುತ್ತು, ಅಸ್ರಣ್ಣ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಗೌಡ ವಕೀಲರು, ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೆರ್ಮುಣ್ಣಾಯ, ಕಾರ್ಯದರ್ಶಿ ಸತೀಶ್ ಎಳ್ಳುಗದ್ದೆ, ಮಹಿಳಾ ಸಮಿತಿಯ ಅಧ್ಯಕ್ಷೆ ಹೇಮಲತಾ ಶ್ರೀನಿವಾಸ್ ಗೌಡ ಗಣಪನಗುತ್ತು, ಗೌರವಾಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಸಮಿತಿಯ ಹಿರಿಯ ಸದಸ್ಯರಾದ ದೇಜಪ್ಪ ಗೌಡ ಅರಣೆಮಾರು, ಲಿಂಗಪ್ಪ ಪೂಜಾರಿ ಬನಂದೂರು, ಲೆಕ್ಕಪರಿಶೋಧಕ ನಾರಾಯಣಗೌಡ ಎಳ್ಳುಗದ್ದೆ, ಪ್ರಧಾನ ಅರ್ಚಕ ಸಂಪತ್ ಕುಮಾರ್, ಬೈಲುವಾರು ಸಮಿತಿಯ ಸಂಚಾಲಕರು ಉಪಸ್ಥಿತರಿದ್ದರು. ದೇವಸ್ಥಾನದ ಮ್ಯಾನೇಜರ್ ಶಿವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ಬೆಳಾಲು: ಅನಂತೋಡಿ ದೇವಸ್ಥಾನದಲ್ಲಿ ಅನಂತ ಚತುರ್ಥಿ ಆಮಂತ್ರಣ ಪತ್ರಿಕೆ ಬಿಡುಗಡೆ
