ಉಜಿರೆ: ಆ. 24ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ಸ್ಥಳೀಯ ಸಂಸ್ಥೆಯ ಶಾಲೆಗಳ ಸ್ಕೌಟ್ಸ್-ಗೈಡ್ಸ್ ಹಾಗೂ ಕಬ್-ಬುಲ್ ಬುಲ್ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಾಣಿ ಪದವಿಪೂರ್ವ ಕಾಲೇಜಿನಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ ಆಯೋಜಿಸಿದ್ದು, ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.