ಮಡಂತ್ಯಾರು: ವಲಯ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟವು ಆ. 23ರಂದು ಮನ್ ಶರ್ ಆಂಗ್ಲ ಮಾಧ್ಯಮ ಶಾಲೆ ಗೇರುಕಟ್ಟೆಯಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 14ರ ವಯೋಮಾನದ ೮ನೇ ತರಗತಿಯ ವಿದ್ಯಾರ್ಥಿಗಳಾದ ನಿಖಿಲ್, ಕೃತೇಶ್, ಶಾನ್ ಮತ್ತು 7ನೇ ತರಗತಿಯ ಗುರುಕಿರಣ್ , ನಿಶಿತ್, ರಿಷಿತ್, ಅಚಿಂತ್ಯ ಹಾಗೂ 6ನೇ ತರಗತಿಯ ಮುಹಮ್ಮದ್ ರಿಫಾಜ್, ಮುಹಮ್ಮದ್ ಆಶ್, ಅವುಕ್ತ್ ರವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜ ಮತ್ತು ಮಂಜುನಾಥ ಅವರು ತರಬೇತಿಯನ್ನು ನೀಡಿರುತ್ತಾರೆ.
ವಲಯ ಮಟ್ಟದ ಪ್ರಾಥಮಿಕ ವಿಭಾಗದ ವಾಲಿಬಾಲ್ ಪಂದ್ಯಾಟ: ಭಾಗವಹಿಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
