
ಉಜಿರೆ: ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಬದ್ದತೆ ಮತ್ತು ಸಾಮಾಜಿಕ ಕಳಕಳಿ ಭಾವನೆಯನ್ನು ಜಾಗೃತಗೊಳಿಸುವ ಉದ್ದೇಶದಿಂದ ಎಸ್. ಡಿ. ಎಮ್ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ , ರೋಟರಿ ಕ್ಲಬ್, ಬೆಳ್ತಂಗಡಿ ಇವರ ಜಂಟಿ ಸಹಭಾಗಿತ್ವದೊಂದಿಗೆ ಮಂಗಳೂರಿನ ರೆಡ್ ಕ್ರಾಸ್ ರಕ್ತನಿಧಿ ಘಟಕದಿಂದ ಆ. 23ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.

ಶಿಬಿರವನ್ನು ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಡಾ. ದಯಾಕರ್ ಉದ್ಘಾಟಿಸಿ ಶುಭಹಾರೈಸಿದರು. ರೆಡ್ ಕ್ರಾಸ್ ರಕ್ತನಿಧಿಯ ಅಧಿಕಾರಿ ಪ್ರವೀಣ್ ಕುಮಾರ್ ರಕ್ತದಾನದ ಮಹತ್ವವನ್ನು ವಿವರಿಸಿದರು. ಸ್ವಯಂ ಸೇವಕಿ ಸ್ವಸ್ತಿ ರಕ್ತದ ಗುಂಪುಗಳ ಬಗ್ಗೆ ಮಾಹಿತಿಯನ್ನು ನೀಡಿದಳು. ಸಮಾರಂಭದಲ್ಲಿ ಪ್ರಾಂಶುಪಾಲ ಸಂತೋಷ್, ಎಸ್.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಯೋಗಾಲಯ ಅಧಿಕಾರಿ ಶಿತಿಕಂಠ ಭಟ್, ಎನ್. ಎಸ್. ಎಸ್ ಯೋಜನಾಧಿಕಾರಿ ಪ್ರಕಾಶ್ ಗೌಡ, ವೈ.ಆರ್.ಸಿ ಕಾರ್ಯಕ್ರಮಾಧಿಕಾರಿ ಅವನೀಶ್ ಪಿ. ಉಪಸ್ಥಿತರಿದ್ದರು. ಸ್ವಯಂ ಸೇವಕ ಹರ್ಷಿತ್ ಸ್ವಾಗತಿಸಿ, ವಿದ್ಯಾರ್ಥಿ ಶ್ರೇಯಸ್ ಕಾರ್ಯಕ್ರಮವನ್ನು ನಿರ್ವಹಿಸಿದರು. ಒಟ್ಟು 67 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ದಿಲನ್ ವಂದಿಸಿದರು.