
ಕಲ್ಮಂಜ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ ಅಧ್ಯಕ್ಷೆ ವಿಮಲಾ ರವರ ಅಧ್ಯಕ್ಷತೆಯಲ್ಲಿ ಆ.25ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.
ಮಾರ್ಗದರ್ಶಕ ಅಧಿಕಾರಿಯಾಗಿ ಪಿ.ಎಂ. ಪೋಷಕ್ ನಿರ್ದೇಶಕ ರಾಜೇಂದ್ರ ಕೃಷ್ಣರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.
ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು. ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷೆ ಪೂರ್ಣಿಮಾ, ಸದಸ್ಯರಾದ ರಾಧಾಕೃಷ್ಣಗೌಡ, ಲೀಲಾ, ಎಂ. ಶ್ರೀಧರ, ಸವಿತಾ, ಕೃಷ್ಣಮೂರ್ತಿ, ಪ್ರವೀಣ, ಶೋಭಾವತಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಗ್ರಾಮಸ್ಥ ರಾಘವೇಂದ್ರ ಮಾತನಾಡಿ, ಕಲ್ಮಂಜ ಶಾಲೆಯ ಹೈಸ್ಕೂಲ್ ಬಳಿ ಚರಂಡಿ ದುರಸ್ತಿ ಕಾರ್ಯ ಪೂರ್ತಿ ಗೊಳಿಸಿದ್ದಾರೆ. ಪಂಚಾಯತ್ ನಿಂದ ಹಣ ಕೊಡಲು ಆರು ತಿಂಗಳ ಕಾಲ ಸತಾಯಿಸಿದ್ದಾರೆ.
ಇಂದು ನಡೆದ ಗ್ರಾಮ ಸಭೆಯಲ್ಲಿ ನೋಡಲ್ ಅಧಿಕಾರಿಗಳ ಮೂಲಕ ಚೆಕ್ ನೀಡಲಾಯಿತು.
ಪಂ. ಅಭಿವೃದ್ಧಿ ಅಧಿಕಾರಿ ಗೀತಾ ಆರ್ ಸಾಲಿಯಾನ್ ಸ್ವಾಗತಿಸಿ, ವರದಿ ವಾಚಿಸಿದರು. ಕಾರ್ಯದರ್ಶಿ ಸರೋಜಿನಿ ನಿರೂಪಿಸಿದರು. ಪಂ. ಸಿಬ್ಬಂದಿ ರಮೇಶ್ ವಂದಿಸಿದರು.