
ಬೆಳ್ತಂಗಡಿ: ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಮತ್ತು ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇದರ ಸಹಯೋಗದೊಂದಿಗೆ ಚಿತ್ರದುರ್ಗ ಮುರುಗೇಶ್ವರ ಮಠದ ಆಶ್ರಯದಲ್ಲಿ ಜರುಗಿದ ಆರನೇ ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ ಶಿಪ್- 2025 ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಮೋಹಿತ್ ಫಾರ್ವರ್ಡ್ ಬೆಂಡ್ ಮತ್ತು ರಿದಮಿಕ್ ಫೈರ್ ನಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರೀಯ ಚಾಂಪಿಯನ್ ಶಿಪ್ ಶಿಬಿರಕ್ಕೆ ಆಯ್ಕೆಗೊಂಡಿದ್ದಾರೆ.