
ಗುಂಡೂರಿ: ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯ ಗುಂಡೂರಿ ಒಕ್ಕೂಟದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಲಕ್ಷ್ಮಿ ನಾರಾಯಣ ಕಾರಂತ ಅವರ ಪೌರೋಹಿತ್ಯದಲ್ಲಿ ನಡೆಯಿತು
ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಿದ್ದಕಟ್ಟೆ ಗುಣಶ್ರೀ ಶಾಲೆಯ ಯೋಗ ಶಿಕ್ಷಕಿ ಶಶಿಕಲಾ ಅವರು ಸಂಸ್ಕೃತಿ, ಸಂಸ್ಕಾರ ಬಗ್ಗೆ ಧಾರ್ಮಿಕ ಉಪನ್ಯಾಸ ನೀಡಿದರು. ಹಾಗೂ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಪೂಜಾರಿ ಅವರು ಯೋಜನೆಯಿಂದ ಅದ ಸಾಮಾಜಿಕ ಹಾಗೂ ಆರ್ಥಿಕ ಬದಲಾವಣೆ ಬಗ್ಗೆ ತಿಳಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಚಂದ್ರ ಜೈನ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಹಾಗೂ ವಲಯ ಮೇಲ್ವಿಚಾರಕಿ ವೀಣಾ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಸಂಗೀತ ಹಾಗೂ ಉಷಾ ಅವರು ಹಾಗೂ ಒಕ್ಕೂಟ ಅಧ್ಯಕ್ಷ ಸದಾನಂದ ಪೂಜಾರಿ ಹಾಗೂ ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಸೇಸಪ್ಪ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಿತಿ ಕಾರ್ಯದರ್ಶಿ ಸೌಜನ್ಯ ಜೈನ ವರದಿ ವಾಚಿಸಿದರು. ಒಕ್ಕೂಟ ಕಾರ್ಯದರ್ಶಿ ಪ್ರವೀಣ್ ಆಚಾರ್ಯ ಸ್ವಾಗತಿಸಿ, ಸೇವಾಪ್ರತಿನಿಧಿ ಹರೀಶ್ ಬಾಡರು ಅವರು ಧನ್ಯವಾದವಿತ್ತರು.