Site icon Suddi Belthangady

ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಎಸ್.ಐ.ಟಿ ದಾಳಿ

ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ವಶದಲ್ಲಿರುವ ಸಾಕ್ಷಿ ದೂರುದಾರನನ್ನು ಸ್ಥಳ‌ಮಹಜರಿಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗೆ ಕರೆದೊಯ್ದಿದ್ದಾರೆ.
ಸಾಕ್ಷಿ ದೂರುದಾರ ತಾನು ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಆಶ್ರಯ ಪಡೆದಿದ್ದೆ ಎಂದು ಹೇಳಿಕೆ ನೀಡಿದ್ದು ಅದರಂತೆ ಎಸ್.ಐ.ಟಿ ತಂಡ ಅವರ ಮನೆಗೆ ಆ.26ರಂದು ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಅಧಿಕಾರಿಗಳ ತಂಡ ತೆರಳಿದೆ.

ಬೆಳ್ತಂಗಡಿ ನ್ಯಾಯಾಧೀಶರಿಂದ ಆ.25 ರಂದು ಸರ್ಚ್ ವಾರೆಂಟ್ ಪಡೆದುಕೊಂಡು ಆರೋಪಿಯನ್ನು ಜೊತೆಯಲ್ಲಿ ಕರೆದುಕೊಂಡು ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಬುರುಡೆ ಪ್ರಕರಣದಲ್ಲಿ ಆರೋಪಿಗೆ ಉಜಿರೆಯ ನಿವಾಸದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಳೆದ ಎರಡು ತಿಂಗಳಿಂದ ಅಶ್ರಯ ನೀಡಿದ್ದರಿಂದ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ಈ ದಾಳಿ ನಡೆಯುತ್ತಿದೆ ಎನ್ನಲಾಗಿದೆ.

Exit mobile version