Site icon Suddi Belthangady

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ

ನಾರಾವಿ: ಭಾರತೀಯ ಜನತಾ ಪಾರ್ಟಿ ದ.ಕ ಜಿಲ್ಲೆ ಮತ್ತು ಬೆಳ್ತಂಗಡಿ ಮಂಡಲದಿಂದ ಆ. 24ರಂದು ನಾರಾವಿ ಕಾಶಿಮಠ ಸಭಾಂಗಣದಲ್ಲಿ ಬಿಜೆಪಿ ನಾರಾವಿ ಮತ್ತು ಕುತ್ಲೂರು ಶಕ್ತಿಕೇಂದ್ರದ ವಿಶೇಷ ಅಭ್ಯಾಸವರ್ಗ ಯಶಸ್ವಿಯಾಗಿ ನಡೆಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮಂಡಲದ ಉಪಾಧ್ಯಕ್ಷ ಮೋಹನ್ ಅಂಡಿಂಜೆ, ಹಿರಿಯ ಕಾರ್ಯಕರ್ತರಾದ ರತ್ನಾಕರ ಭಟ್, ಚೆಲುವಯ್ಯ ಪೂಜಾರಿ ಮತ್ತು ಕಾಂತಪ್ಪ ಮೂಲ್ಯ ಅವರು ದೀಪ ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆಗೈದು ಕಾರ್ಯಕ್ರಮ ಉದ್ಘಾಟಿಸಿದರು.

ಸಂಘಟನಾ ಅವಧಿಯ ಸಂಪನ್ಮೂಲ ವ್ಯಕ್ತಿಗಳಾಗಿ ದ.ಕ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು ಮತ್ತು ವೇಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಭಾಗವಹಿಸಿದ್ದರು.

ಅಭ್ಯಾಸವರ್ಗದ ಸಮಾರೋಪ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶ್ರಮಿಕ ಶಾಸಕ ಹರೀಶ್ ಪೂಂಜ ಅವರು ಭಾಗವಹಿಸಿ ಕಾರ್ಯಕರ್ತ ಬಂಧುಗಳಿಗೆ ರಾಷ್ಟ್ರೀಯತೆ,ಹಿಂದುತ್ವ ಮತ್ತು ಪಕ್ಷ ಸಂಘಟನೆಯ ಬಗ್ಗೆ ವಿಶೇಷ ಮಾರ್ಗದರ್ಶನ ನೀಡಿದರು. ವೇದಿಕೆಯಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ಉಪಾಧ್ಯಕ್ಷೆ ಸುಮಿತ್ರಾ ಮತ್ತು ಕೃಷಿ ಪತ್ತಿನ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ ಉಪಸ್ಥಿತರಿದ್ದರು.

ಅಭ್ಯಾಸವರ್ಗದಲ್ಲಿ ನಾರಾವಿ ಮತ್ತು ಕುತ್ಲೂರು ಶಕ್ತಿಕೇಂದ್ರ ಪ್ರಮುಖರಾದ ಪ್ರಕಾಶ್ ಆಚಾರ್ಯ, ರತ್ನಾಕರ ಬಡೆಕ್ಕಿಲ, ಮಂಡಲ ಸಾಮಾಜಿಕ ಜಾಲತಾಣ ಸಹ ಸಂಚಾಲಕ ರಂಜಿತ್ ಮರೋಡಿ, ನಾರಾವಿ ಮತ್ತು ಕುತ್ಲೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಮತ್ತು ನಿರ್ದೇಶಕರು, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು, ನಾರಾವಿ ಗ್ರಾಮ ಪಂಚಾಯತ್ ಸದಸ್ಯರುಗಳು, ಮಂಡಲ ಮತ್ತು ಮೋರ್ಚಾದ ಪದಾಧಿಕಾರಿಗಳು, ಬೂತ್ ಸಮಿತಿಯ ಪದಾಧಿಕಾರಿಗಳು, ಪ್ರಮುಖರು, ಹಿರಿಯರು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

ಮುರಾರಿ ರಾವ್ ಹೊಳೆಹೊದ್ದು ಬಿಜೆಪಿ ಗೀತೆ ಹಾಡಿದರು. ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಉದಯ್ ಹೆಗ್ಡೆ ಸ್ವಾಗತಿಸಿದರು. ಬಿಜೆಪಿ ಮಹಾಶಕ್ತಿ ಕೇಂದ್ರ ನಾರಾವಿಯ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Exit mobile version