Site icon Suddi Belthangady

ಬೆಳ್ತಂಗಡಿ: ಹ್ಯಾಂಡ್ ಬಾಲ್ ಪಂದ್ಯಾಟ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ಆ.23ರಂದು ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಬಾಲಕ ಬಾಲಕಿಯರ ಹ್ಯಾಂಡ್ ಬಾಲ್ ಪಂದ್ಯಾಟ ನಡೆಯಿತು. ಇದರಲ್ಲಿ ಬೆಳ್ತಂಗಡಿಯ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಹಾಗೂ ಪ್ರೌಢಶಾಲಾ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಶಾಲೆಯ ಬಾಲಕ ಬಾಲಕಿಯರ ಹ್ಯಾಂಡ್ ಬಾಲ್ ತಂಡದಿಂದ ಕೆಲವು ಮಕ್ಕಳನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಯಿತು.

ಶ್ರಾವಣಿ (9ನೇ) ಬೆಸ್ಟ್ ಶೂಟರ್ ಹಾಗೂ ಸುಭಿಕ್ಷಾ (7ನೇ) ಬೆಸ್ಟ್ ಗೋಲ್ ಕೀಪರ್ ಪ್ರಶಸ್ತಿಯನ್ನು ಪಡೆದರು. ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕ ಗುರುಗಳು ವೋಲ್ಟರ್ ಡಿಮೆಲ್ಲೋ ಹಾಗೂ ಮುಖ್ಯೋಪಾಧ್ಯಾಯ ಕ್ಲಿಫರ್ಡ್ ಪಿಂಟೋ ಅವರು ಅಭಿನಂದಿಸಿದರು.

Exit mobile version