Site icon Suddi Belthangady

ಕಳಿಯ: ಕೆರೆಗೆ ಬಿದ್ದು ವ್ಯಕ್ತಿ ಸಾವು

ಕಳಿಯ: ಕೆರೆಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಆ.26ರಂದು ಬೆಳ್ತಂಗಡಿ ತಾಲೂಕಿನ ಕಳಿಯ ನ್ಯಾಯತರ್ಪು ಪಲ್ಲಾದೆ ಎಂಬಲ್ಲಿ ನಡೆದಿದೆ.
ಮೃತರನ್ನು ಶ್ರೀಧರ ಎಂದು ಗುರುತಿಸಲಾಗಿದೆ. ಇವರು ಪಲ್ಲಾದೆಯಲ್ಲಿರುವ ಖಾಸಗಿ ತೋಟದಲ್ಲಿರುವ ದೊಡ್ಡ ಕೆರೆಗೆ ಮೀನು ಹಿಡಿಯಲೆಂದು ಬಂದಿದ್ದಾರೆ. ಈ ವೇಳೆ ಶ್ರೀಧರ ಅವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರಬಹುದು ಎಂದು ಅನುಮಾನಿಸಲಾಗಿದೆ. ಕೆರೆಯಲ್ಲಿ ಆ.26ರಂದು ಮೃತದೇಹ ಪತ್ತೆಯಾಗಿದ್ದು ಸ್ಥಳೀಯರ ಸಹಕಾರದೊಂದಿಗೆ ಮೃತದೇಹವನ್ನು ಪೊಲೀಸರು ಮೇಲಕ್ಕೆ ಎತ್ತಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Exit mobile version