Site icon Suddi Belthangady

ಮಾಲಾಡಿ, ಸೋಣಂದೂರು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಮಾಲಾಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ. 25ರಂದು ನಡೆದ ಮಾಲಾಡಿ ಮತ್ತು ಸೋಣಂದೂರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಮಾಲಾಡಿ ಕೊಲ್ಪೆದಬೈಲು ಎಸ್.ಕೆ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತ ಲಿಂಗಪ್ಪ ಟೈಲರ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಪಕ್ಷದ ಹಿರಿಯ ಕಾರ್ಯಕರ್ತ ಪದ್ಮನಾಭ ಶೆಟ್ಟಿ ಅರ್ಕಜೆ ಉದ್ಘಾಟನಾ ಭಾಷಣ ಮಾಡಿ, ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಹಿರಿಯ ಕಾರ್ಯಕರ್ತರು ನಿರ್ವಹಿಸಿದ ಪಾತ್ರದ ಬಗ್ಗೆ ತಿಳಿಸಿದರು. ಶಾಸಕ ಹರೀಶ್ ಪೂಂಜಾ ಅವರು ಮಾತನಾಡಿ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ಕೃತವಾಗಿ ಸಮಾಲೋಚನೆ ನಡೆಸಿದರು.

ಪ್ರಮುಖರಾದ ರವಿ ಇಳಂತಿಲ, ತಣ್ಣೀರುಪಂಥ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು, ಶಿರ್ಲಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧೀರ್ ಸುವರ್ಣ ಬೈಠಕ್ ನೀಡಿದರು.

ಕುವೆಟ್ಟು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರ ಕಾಂತಗೌಡ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ, ಜಿಲ್ಲಾ ಭಾಜಪ ಕಾರ್ಯದರ್ಶಿ ವಸಂತಿ ಮಚ್ಚಿನ, ಮಡಂತ್ಯಾರ್ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಗೋಪಾಲಕೃಷ್ಣ, ಸಿಎ ಬ್ಯಾಂಕ್ ಅಧ್ಯಕ್ಷ ಜೋಯಲ್ ಮೆಂಡೋನ್ಸ, ಪಕ್ಷದ ಪ್ರಮುಖರಾದ ಪಂಚಾಯತ್ ಸದಸ್ಯ ನಂದಕುಮಾರ್, ಸಿ.ಎ. ಬ್ಯಾಂಕ್ ನಿರ್ದೇಶಕರು, ಹಾಲು ಉತ್ಪಾದಕರ ಸಂಘ ನಿರ್ದೇಶಕರು, ಜನಪ್ರತಿನಿಧಿಗಳು, ಬೂತ್ ಅಧ್ಯಕ್ಷ, ಕಾರ್ಯದರ್ಶಿ ಪದಾಧಿಕಾರಿಗಳು, ಅನನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ದಿನೇಶ್ ಕರ್ಕೇರ ಸ್ವಾಗತಿಸಿ, ತಾಲೂಕು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ತುಳಸಿ ಉಮೇಶ್ ಕಾರ್ಯಕ್ರಮ ನಿರ್ವಹಿಸಿದರು.

Exit mobile version